( ಪಶ್ಚಿಮಘಟ್ಟ ವಾಯ್ಸ್ ಡೈಲಿ ನ್ಯೂಸ್)ಮಲೆನಾಡಲ್ಲಿ ಅರಣ್ಯ ಒತ್ತುವರಿಗೆ ಶಿಕ್ಷೆ ಫಿಕ್ಸ್!?


ಪಶ್ಚಿಮಘಟ್ಟ ವಾಯ್ಸ್ ಡೈಲಿ ನ್ಯೂಸ್:- 
ತೀರ್ಥಹಳ್ಳಿ: ಮೀಸಲು ಕಿರು ಅರಣ್ಯ ಪ್ರದೇಶ ಒತ್ತುವರಿ ಸಾಬೀತಾದ ಹಿನ್ನೆಲೆಯಲ್ಲಿ ತಾಲೂಕಿನ ಮೇಲಿನ ಕುರುವಳ್ಳಿ ಗ್ರಾ.ಪಂ. ವ್ಯಾಪ್ತಿಯ ಹುಣಸವಳ್ಳಿ ಗ್ರಾಮದ ಉಮೇಶ್ (43)ಗೆ 1 ವರ್ಷ ಸಾದಾ ಜೈಲು ಶಿಕ್ಷೆ 5 ಸಾವಿರ ರೂ. ದಂಡ ವಿಧಿಸಿ ಕರ್ನಾಟಕ ಭೂ ಕಬಳಿಕೆ ನಿಷೇಧ ವಿಶೇಷ ನ್ಯಾಯಾಲ ತೀರ್ಪ ನೀಡಿದೆ.

ಮಲೆನಾಡಲ್ಲಿ ಅರಣ್ಯ ಒತ್ತುವರಿಗೆ ಶಿಕ್ಷೆ ಫಿಕ್ಸ್!?
– ಅರಣ್ಯ ಒತ್ತುವರಿದಾರನಿಗೆ 1 ವರ್ಷ ಜೈಲು, 5 ಸಾವಿರ ರೂ. ದಂಡ !!
* ತೀರ್ಪು ನೀಡಿದ ಕರ್ನಾಟಕ ಭೂ ಕಬಳಿಕೆ ನಿಷೇಧ ವಿಶೇಷ ಕೋರ್ಟ್
* ದಂಡ ತಪ್ಪಿದಲ್ಲಿ 3 ತಿಂಗಳು ಸಾದಾ ಜೈಲು ಶಿಕ್ಷೆ

ಹುಣಸವಳ್ಳಿ ಗ್ರಾಮದ ಸರ್ವೆ ನಂಬರ್ 13ರಲ್ಲಿ 12 ಗುಂಟೆ ಕಿರು ಅರಣ್ಯ ಪ್ರದೇಶ ಒತ್ತುವರಿ ಮಾಡಿದ ಕುರಿತಂತೆ ತೀರ್ಥಹಳ್ಳಿ ವಲಯ ಅರಣ್ಯಾಧಿಕಾರಿ 2019ರಲ್ಲಿ ಕ್ರಿಮಿನಲ್ ಮೊಕದ್ದಮೆ ದಾಖಲಿಸಿದ್ದರು. ಈ ಸಂಬಂಧ ವಿಶೇಷ ನ್ಯಾಯಾಲಯದ ನ್ಯಾಯಿಕ ಸದಸ್ಯರಾದ ಪಾಟೀಲ ನಾಗಲಿಂಗನಗೌಡ, ಕಂದಾಯ ಸದಸ್ಯ ಕೆ.ಎಚ್‌. ಅಶ್ವತ್ಥನಾರಾಯಣಗೌಡ ನೇತೃತ್ವದ ಪೀಠ ವಿಚಾರಣೆ ನಡೆಸಿ ಮಾರ್ಚ್ 3ರಂದು ತೀರ್ಪು ನೀಡಿದೆ.
ಒತ್ತುವರಿ ಆರೋಪಿ ದಂಡ ಪಾವತಿಸಲು ವಿಫಲವಾದರೆ 3 ತಿಂಗಳು ಸಾದಾ ಜೈಲು ಶಿಕ್ಷೆ ಅನುಭವಿಸಬೇಕು.ತಕ್ಷಣ ಒತ್ತುವರಿ ಜಮೀನು ತೆರವು ಮಾಡಬೇಕು. ಈ ಕುರಿತಂತೆ 60 ದಿನದೊಳಗೆ ವರದಿ ಸಲ್ಲಿಸುವಂತೆ ವಲಯಾರಣ್ಯಾಧಿಕಾರಿಗೆ ನ್ಯಾಯಪೀಠ ಆದೇಶಿಸಿದೆ.

PGK

Post a Comment

Previous Post Next Post