ಕಾರವಾರ: ಮಾಜಿ ನಗರಸಭೆ ಸದಸ್ಯ ಸತೀಶ್ ಕೋಳಂಕರ್ (62) ಅವರನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಬಿಎಸ್ಎನ್ಎಲ್ ಕಚೇರಿ ಬಳಿ ನಡೆದಿದೆ.
ಇಂದು ಬೆಳಗ್ಗೆ ವಾಯುವಿಹಾರಕ್ಕೆ ತೆರಳಿದ್ದ ವೇಳೆ ಇಬ್ಬರು ದುಷ್ಕರ್ಮಿಗಳು ಸತೀಶ್ ಅವರ ಮೇಲೆ ಹಲ್ಲೆ ನಡೆಸಿದೆ. ಬಳಿಕ ಚಾಕುವಿನಿಂದ ಎದೆಗೆ ಇರಿದು ಹತ್ಯೆ ಮಾಡಿದೆ. ತಕ್ಷಣ ಅವರನ್ನು ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ವೈಯಕ್ತಿಕ ದ್ವೇಷಕ್ಕೆ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದ್ದು, ಈ ಸಂಬಂಧ ಕಾರವಾರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.