ಪಶ್ಚಿಮಘಟ್ಟ ವಾಯ್ಸ್ ಡೈಲಿ ನ್ಯೂಸ್.. KEA: ಕರ್ನಾಟಕ ಪರೀಕ್ಷಾ ಪ್ರಾಧಿಕಾರ 2025 ರ ಸಾಮಾನ್ಯ ಪ್ರವೇಶ ಪರೀಕ್ಷೆ ದಿನಾಂಕ ಪ್ರಕಟ ಮಾಡಿದ್ದು, ಎ.15 ರಿಂದ 17 ರವರೆಗೆ ಸಿಇಟಿ ಪರೀಕ್ಷೆ ನಡೆಯಲಿದೆ. ಕನ್ನಡ ಭಾಷೆ ಪರೀಕ್ಷೆ ಎಪ್ರಿಲ್ 15ಕ್ಕೆ ಹಿಂದೂಡಿಕೆ ಆಗಿದೆ. ಎಪ್ರಿಲ್ 18ಕ್ಕೆ ನಿಗದಿಪಡಿಸಲಾಗಿದ್ದ ಪರೀಕ್ಷೆಯನ್ನು ಅಂದು ಗುಡ್‌ಫ್ರೈಡೇ ಇರುವುದರಿಂದ ಸರಕಾರ ಪರೀಕ್ಷಾ ದಿನಾಂಕದಲ್ಲಿ ಬದಲಾವಣೆ ಮಾಡಿದೆ.
ಏಪ್ರಿಲ್ 15ರಂದು ಕನ್ನಡ ಪರೀಕ್ಷೆ ಬೆಂಗಳೂರು, ಮಂಗಳೂರು, ವಿಜಯಪುರ, ಬೆಳಗಾವಿ ಕೇಂದ್ರಗಳಲ್ಲಿ ಮಾತ್ರ ಕನ್ನಡ ಭಾಷಾ ಪರೀಕ್ಷೆ ನಡೆಯಲಿದೆ. 10ನೇ ತರಗತಿಯಲ್ಲಿ ಕನ್ನಡವನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯಾಗಿ ಕಲಿತವರು,ಕನ್ನಡ ಮಾಧ್ಯಮದಲ್ಲಿ ಓದಿದವರಿಗೆ ಮತ್ತು ಕೆಇಎ ನಡೆಸಿದ ಕನ್ನಡ ಪರೀಕ್ಷೆಯಲ್ಲಿ ಉತ್ತೀರ್ಣರಾದವರಿಗೂ ವಿನಾಯಿತಿ ಇರುತ್ತದೆ. ಏಪ್ರಿಲ್ 16 ರಂದು 10:30 ರಿಂದ ಭೌತಶಾಸ್ತ್ರ ಹಾಗೂ ಮಧ್ಯಾಹ್ನ 2:30 ರಿಂದ ರಾಸಾಯನಶಾಸ್ತ್ರ ಪರೀಕ್ಷೆಗಳು ನಡೆಯಲಿದ್ದು, ಮರುದಿನ ಅಂದರೆ ಏಪ್ರಿಲ್ 17 ರಂದು ಬೆಳಗ್ಗೆ ಗಣಿತ ಮತ್ತು ಮಧ್ಯಾಹ್ನ ಜೀವಶಾಸ್ತ್ರ ಪರೀಕ್ಷೆ ನಡೆಯಲಿದೆ ಎಂದು ಟಿವಿ9 ವರದಿ ಮಾಡಿದೆ.